Public Voice
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ ಸಿನಿಮಾ

ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಕೊರೋನಾಗೆ ಬಲಿ….

ಬೆಂಗಳೂರು :   ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ  ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಕೊರೋನಾಗೆ ಬಲಿಯಾಗಿದ್ದಾರೆ.

ಆರೋಗ್ಯದಲ್ಲಿ ಏರು ಪೇರು ಉಂಟಾಗಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ರಾಮು ಅವರನ್ನು ದಾಖಲಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

52 ವರ್ಷದ ರಾಮು ಅವರಿಗೆ ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಹೆಚ್ಚು ಹಣ ಹೂಡಿಕೆ ಮಾಡಿ ಅದ್ದೂರಿಯಾಗಿ ಚಿತ್ರ ನಿರ್ಮಾಣ ಮಾಡಿದ ಕಾರಣಕ್ಕೆ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿದ್ದರು.       ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಚೈತ್ರದ ಪ್ರೇಮಾಂಜಲಿ ಸಿನಿಮಾ ಮೂಲಕ ಕನ್ನಡ ಚಿತ್ರ ಜಗತ್ತಿಗೆ ಪರಿಚಯವಾಗಿದ್ದ ರಾಮ ಅಧಿಪತಿ ಸಿನಿಮಾದಿಂದ‌ ನಿರ್ಮಾಪಕ ರಾಗಿ ಚಿತ್ರರಂಗಕ್ಕೆ ಎಂಟ್ರಿ ಆಗಿದ್ದರು. ಅರ್ಜುನ್ ಗೌಡ ರಾಮು ನಿರ್ಮಾಣದ ಕೊನೆಯ ಸಿನಿಮಾ. ಪತ್ನಿ ಮಾಲಾಶ್ರೀಗೆ ಇನ್ನೆರಡು ಸಿನಿಮಾ ನಿರ್ಮಾಣ ಮಾಡಬೇಕು, ತಾವೇ ನಿರ್ದೇಶನ ಮಾಡಬೇಕು ಎಂಬ ಆಸೆ ಹೊಂದಿದ್ದರು.

ಸ್ಯಾಂಡಲ್ ವುಡ್ ನಲ್ಲಿ ಅದ್ದೂರಿ ಚಿತ್ರಗಳನ್ನು ನಿರ್ಮಾಣ ಮಾಡಿದ ಖ್ಯಾತಿ ನಿರ್ಮಾಪಕ ರಾಮು ಅವರಿಗೆ ಸಲ್ಲುತ್ತದೆ. ಅದ್ಧೂರಿ ಚಿತ್ರಗಳ ನಿರ್ಮಾಣದ ಮೂಲಕ ಕೋಟಿ ನಿರ್ಮಾಪಕ ರಾಮು ಎಂದೇ ಅವರು ಖ್ಯಾತರಾಗಿದ್ದರು. ರಾಮು ನಿರ್ಮಾಣ ಮಾಡಿದ ಚಿತ್ರಗಳು ಗಲ್ಲಾಪೆಟ್ಟಿಗೆ ಕೊಳ್ಳೆಹೊಡೆದಿವೆ.

Related posts

ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ. ಟಫ್ ರೂಲ್ಸ್ ಮಾತ್ರ……

Times fo Deenabandhu

ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನಿಂಗ್ ಉಪಕರಣ ಒದಗಿಸುವಂತೆ ಪ್ರಧಾನಿಗೆ ಪತ್ರ ಬರೆದ ನವೀನ್ ತಲಾರಿ

ಬಿಜೆಪಿ ವಿಶ್ವನಾಥ್ ಅವರನ್ನು ಅಮಾನತ್ತು ಮಾಡಲಿ:ಕೂಡ್ಲೂರು ಶ್ರೀಧರಮೂರ್ತಿ

Public Voice