Public Voice
ಕ್ರೈಮ್ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಕಲ್ಬುರ್ಗಿಯಲ್ಲಿ ಆಕ್ಸಿಜನ್ ಸಿಗದೆ ನಾಲ್ವರು ರೋಗಿಗಳು ಸಾವು…

ಕಲಬುರಗಿ:  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ರೋಗಿಗಳು ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆಕ್ಸಿಜನ್ ದುರಂತ ನಡೆದಿದೆ.

ಹೌದು  ಕಲಬುರಗಿಯಲ್ಲಿ ಆಕ್ಸಿಜನ್ ದುರಂತ ಸಂಭವಿಸಿದ್ದು, ಆಕ್ಸಿಜನ್ ಸಿಗದೇ ನಾಲ್ವರು ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಅಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.  ಅಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ರೋಗಿಗಳಿಗೆ ಮುಂಜಾನೆ 4 ಗಂಟೆ ಸುಮಾರಿಗೆ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆಯಾಗಿಲ್ಲ. ಆಕ್ಸಿಜನ್ ಸಿಗದೆ ಕೊರೋನಾ ಸೋಂಕಿತರು ಪರದಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ರೋಗಿಗಳು ಸಾವನ್ನಪ್ಪಿದ್ದರು, ಇದೀಗ ಕಲಬುರಗಿಯಲ್ಲೂ  ಇಂತಹ ಘಟನೆ ನಡೆದಿದೆ.

 

Related posts

ರೆಮ್ಡೆಸಿವಿರ್ ಚುಚ್ಚುಮದ್ದು ಬೆಲೆಯಲ್ಲಿ ಭಾರೀ ಇಳಿಕೆ

Times fo Deenabandhu

ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ: ಕಾರಣವೇನು..?

Times fo Deenabandhu

ಆಯಿಲ್ ಥೆರಪಿ

Public Voice