Public Voice
  • Home
  • ಕ್ರೈಮ್
  • ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ: ಆತ್ಮಹತ್ಯೆಗೆ ಶರಣು
ಕ್ರೈಮ್ ಜಿಲ್ಲೆ ನ್ಯೂಸ್ ಮೈಸೂರು ರಾಜ್ಯ

ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ: ಆತ್ಮಹತ್ಯೆಗೆ ಶರಣು

ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಷ್ಮಿಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಲಕ್ಷ್ಮೀಪುರ ತಮ್ಮಣ್ಣಗೌಡ ಮತ್ತು ಹೇಮಾವತಿ ಅವರ ಮಗ ಶರತ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ.
ಹಾಲಿನ ಡೈರಿ ಅಧ್ಯಕ್ಷೆ ಜಯಂತಿಮಂಜೇಗೌಡ, ನಿವೃತ್ತ ಇಂಜಿನಿಯರ್ ಎಲ್.ಆರ್.ಕುಮಾರಸ್ವಾಮಿ ಮತ್ತು ಇತರರು ನೀಡಿದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂಘದ
ಲೆಟರ್‌ಹೆಡ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ತೆಂಡೇಕೆರೆ ಸಮೀಪದ ಫುಡ್ ಪಾರ್ಕ್ ಬಳಿ ಕಾರಿನಲ್ಲಿ ಕುಳಿತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಲಕ್ಷ್ಮೀಪುರ ಗ್ರಾಮದ ತಮ್ಮಣ್ಣಗೌಡರ ಮಗ ಶರತ್ ಕಳೆದ ಏಳು ವರ್ಷಗಳಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ವಿಷಯ ತಿಳಿದ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ನಿರಂಜನ್, ಸಬ್ ಇನ್ಸ್ ಪೆಕ್ಟರ್ ಸುರೇಶ್, ಅಪರಾಧ ವಿಭಾಗದ ಪಿ.ಎಸ್.ಐ ಪ್ರಮೋದ್ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ದ ಕ್ರಮಕ್ಕೆ ಆಗ್ರಹ:
ಶರತ್ ಅವರು ಡೆತ್ ನೋಟ್ ನಲ್ಲಿ ನಮೂದಿಸಿರುವಂತೆ ಆತನ ಆತ್ಮಹತ್ಯೆಗೆ ಕಾರಣವಾಗಿರುವ ಎಲ್ಲಾ ಆರೋಪಿಗಳ ವಿರುದ್ದ ಕಠಿಣ ಕಾನೂನುಕ್ರಮ ಜರುಗಿಸಬೇಕು ಎಂದು ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು, ಯುವ ಕಾಂಗ್ರೆಸ್ ಅಧ್ಯಕ್ಷರಾದ ಚೇತನ್ ಕುಮಾರ್ , ಲಕ್ಷ್ಮೀಪುರ ಪ್ರಸನ್ನಕುಮಾರ್ ಇತರರು ಪೋಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Related posts

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ರಾಜ್ಯಕ್ಕೆ ಹಂಚಿಕೆ ಮಾಡಿ…

ಅಕ್ರಮ ಮರಳು ದಂಧೆಕೋರರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ: ಎಚ್.ಜಿ.ಸುರೇಂದ್ರ

Times fo Deenabandhu

ಬಿಜೆಪಿ ಹೈಕಮಾಂಡ್ ನಿಲುವಿಗೆ ಖಂಡನೆ

Public Voice