Public Voice
ಇತರೆ ಜಿಲ್ಲೆಗಳು ದೇಶ ನ್ಯೂಸ್ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕನ್ನಡ ನಾಡು ಕಂಡ ಧೀಮಂತ ನಾಯಕ ದೇ. ಅರಸು: ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ನಾಮಕರಣದಿಂದ ಹಿಡಿದು ಕರ್ನಾಟಕ ಕಟ್ಟುವವರೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಬೊಮ್ಮಾಯಿ, “ಕನ್ನಡ ನಾಡು ಕಂಡಂಥ ಧೀಮಂತ ನಾಯಕರು, ಜನಪರ, ಹಿಂದುಳಿದ ಮತ್ತು ರೈತಪರ ಮುಖ್ಯಮಂತ್ರಿ ದೇವರಾಜ ಅರಸು” ಸಮಾರಂಭದಲ್ಲಿ ಮಾಜಿ ಸಿಎಂ ದಿ. ದೇವರಾಜ ಅರಸು ಅವರ ನಾಯಕತ್ವದ ಗುಣಗಳ ಬಗ್ಗೆ ಕೊಂಡಾಡಿರುವ ದೇವರಾಜ ಅರಸು, “ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನವಿದು. ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ. ಹಿಂದುಳಿದ ವರ್ಗಗಳ ಏಳಿಗೆಗಾಗಿ, ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಕೆಲಸ ಮಾಡಬೇಕು. ವಿಶೇಷವಾಗಿ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕೆನ್ನುವ ಸಂಕಲ್ಪವನ್ನು ಮಾಡುವ ದಿನ ಇದು ಎಂದು ಭಾವಿಸಿದ್ದೇನೆ” ಎಂದರು.
ಮೈಸೂರು ರಾಜ್ಯ 1973 ನವೆಂಬರ್ 1 ರಂದು ಕರ್ನಾಟಕ ಎಂದು ಮರುನಾಮಕರಣ ಗೊಂಡ ಅವಧಿಯಲ್ಲಿ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸಿದ ಅವರ ಹೆಜ್ಜೆ ಗುರುತುಗಳು ಕರ್ನಾಟಕದ ಭೂಮಿಯಲ್ಲಿ ಶಾಶ್ವತವಾಗಿದೆ. “ದೇವರಾಜ ಅರಸು ಅವರು ಜಾರಿಗೆ ತಂದ ಕ್ರಾಂತಿಕಾರಿ ಭೂ ಸುಧಾರಣೆ ಕಾಯ್ದೆ, ನಮ್ಮೆಲ್ಲರಿಗೂ ಅತ್ಯಂತ ಸ್ಫೂರ್ತಿದಾಯಕ.
ಕರ್ನಾಟಕದಲ್ಲಿ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎನ್ನುವ ಘೋಷಣೆಯನ್ನು ಅಕ್ಷರಶಃ ಪಾಲಿಸಿದವರು, ಅಧಿಕ ಅವಧಿ ಮುಖ್ಯಮಂತ್ರಿಯಾಗಿದ್ದ ದಾಖಲೆಯೂ ಅವರ ಹೆಸರಿನಲ್ಲಿದೆ ಅವರ ವಿಚಾರಧಾರೆಗಳು ಪಕ್ಷಾತೀತವಾಗಿ, ಸರ್ವ ಸಮ್ಮತವಾಗಿ ಒಪ್ಪುವಂಥ ನಾಯಕರು” ಎಂದು ನುಡಿದರು.
ಇವರು ಅದಿಕಾರಾವಧಿಯಲ್ಲಿ ಹಿಂದುಳಿದ ವರ್ಗದ ಆಯೋಗವನ್ನು ಐ ಉ ಹಾವನೂರು ಅವರ ನೇತೃತ್ವದಲ್ಲಿ ಸ್ಥಾಪಿಸಿದರು. ಇವರು ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದರು. ಇವರ ಜನ್ಮ ಶತಮಾನೋತ್ಸವವನ್ನು 2015 ಅಕ್ಟೋಬರ್ 20 ರಿಂದ ಒಂದು ವರ್ಷದ ಕಾಲ ಕರ್ನಾಟಕ ಸರ್ಕಾರವು ಆಚರಿಸಿತ್ತು.
ಇವರು ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ್ ಕಲ್ಲಹಳ್ಳಿ ಗ್ರಾಮದವರಾಗಿದ್ದು, ಜನ್ಮ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಇವರು ಜನಿಸಿದ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಿತ್ತು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಾಜಿ ಹಾಕಿ ಆಟಗಾರ, ಒಲಿಂಪಿಕ್ ಚಿನ್ನದ ಪದಕ ವಿಜೇತ ರವೀಂದರ್ ಪಾಲ್ ಸಿಂಗ್ ಕೊರೊನಾಗೆ ಬಲಿ

ಪುಸ್ತಕಗಳ ಪ್ರಸ್ತುತತೆಯನ್ನು ನಾವು ಉಳಿಸಿಕೊಳ್ಳಬೇಕಿದೆ : ಡಾ.ಪಿ.ನಾರಾಯಣ್

Times fo Deenabandhu

ಕೊರೋನಾ ತಡೆ ಕುರಿತು ಚರ್ಚಿಸಲು ನಾಳೆ ಸಂಜೆ ಸರ್ವಪಕ್ಷ ಸಭೆ…

Times fo Deenabandhu