Public Voice
  • Home
  • ಜಿಲ್ಲೆ
  • ದೇ. ಅರಸು ಅವರು ಮಾಡಿರುವ ಕೆಲಸಗಳೇ ನಮಗೆ ಸ್ಫೂರ್ತಿ- ಸಿದ್ದರಾಮಯ್ಯ
ಇತರೆ ಜಿಲ್ಲೆಗಳು ಜಿಲ್ಲೆ ದೇಶ ನ್ಯೂಸ್ ಮುಖ್ಯಾಂಶಗಳು ರಾಜಕೀಯ ರಾಜ್ಯ

ದೇ. ಅರಸು ಅವರು ಮಾಡಿರುವ ಕೆಲಸಗಳೇ ನಮಗೆ ಸ್ಫೂರ್ತಿ- ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅರಸು ಅವರು ಧೀಮಂತ ನಾಯಕ. ಅವರು ಮಾಡಿರುವ ಕೆಲಸಗಳೇ ನಮಗೆ ಸ್ಫೂರ್ತಿ ಎಂದು
ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಪ್ರದೇಶ ಕಾಂಗ್ರೆಸ್ ಸಮಿತಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ, ದಿವಂಗತ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿ ಯಾವುದೋ ಒಂದು ಜಾತಿ ಅಥವಾ ಜನಾಂಗದ ಪರವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಲ್ಲ. ಹೀಗಿರುವಾಗ ವರದಿಯನ್ನು ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದೇಕೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ ಅವರು ವರದಿಯನ್ನು ಸಿದ್ದರಾಮಯ್ಯ ಅವರೇ ಬರೆಯಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ, ಇದು ಅಪ್ಪಟ ಸುಳ್ಳು ಎಂದರು.

ಸರ್ಕಾರಿ ಶಾಲಾ ಶಿಕ್ಷಕರ ನೆರವಿನಿಂದ ತಯಾರಿಸಿದ ವರದಿ ಅದು,. ಖಾಸಗಿಯವರು ಮಾಡಿದ್ದಲ್ಲ. ಈ ದೇಶದ ಸಂಪತ್ತು, ಅಧಿಕಾರ ಎಲ್ಲರಿಗೂ ಸಮಾನವಾಗಿ ಹಂಚಿಕೆ ಆಗಬೇಕು. ಅದಕ್ಕೆ ಅಂಕಿ-ಅಂಶ ಅಗತ್ಯ. ಈ ಕಾರಣಕ್ಕಾಗಿಯೇ ವರದಿ ತಯಾರಿಸಲು ನಿರ್ಧರಿಸಲಾಗಿತ್ತು. ಒಲ್ಲದ ಗಂಡ ಮೊಸರಲ್ಲಿ ಕಲ್ಲು ಹುಡುಕಿದಂತೆ ವರದಿ ಬಗ್ಗೆ ಅಪಸ್ವರಗಳು ಬೇಡ ಎಂದ ಅವರು ಇಡೀ ಸಮಾಜದ ಹಾಗೂ ಎಲ್ಲ ಧರ್ಮದವರು, ಜಾತಿ ಜನಾಂಗದವರನ್ನು ಒಳಗೊಂಡಿರುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ಬಿಜೆಪಿಯವರು ಎಂದಾದರೂ ಮಿಸಲು ಸೌಲಭ್ಯದ ಪರವಾಗಿ ಮಾತನಾಡಿದ್ದಾರೆಯೇ ? ಮಂಡಲ್ ಆಯೋಗದ ಜಾರಿಗೆ ತರಲು ಹೊರಟಾಗ ಶಾಲಾ ಮಕ್ಕಳನ್ನು ಎತ್ತಿಕಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದವರು ಬಿಜೆಪಿ ನಾಯಕರು, ಮೀಸಲು ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ಹಾವನೂರು, ಮಂಡಲ್, ಚಿನ್ನಪ್ಪ ರೆಡ್ಡಿ ಆಯೋಗದ ವರದಿಗಳನ್ನು ತೀವ್ರವಾಗಿ ವಿರೋಧಿಸಿದವರು ಬಿಜೆಪಿ ಪಕ್ಷದವರು ಎಂದರು.
ದೇವರಾಜ ಅರಸು ಅವರು ಭೂ ಸುಧಾರಣೆ, ಜೀತ ವಿಮುಕ್ತಿ, ಋಣಮುಕ್ತ ಯೋಜನೆ ಸೇರಿದಂತೆ ಕಾಂಗ್ರೆಸ್ನ ಎಲ್ಲ ಕಾರ್ಯಕ್ರಮಗಳನ್ನು ಯಥಾವತ್ತಾಗಿ ಜಾರಿಗೆ ತಂದು ಜನರಿಗೆ ತಲುಪಿಸಿದವರು. ಕನಸಿನಲ್ಲಿಯೂ ವಿಧಾನಸೌಧ ನೋಡದವರನ್ನು, ವಿಧಾನಸೌಧದ ಮೆಟ್ಟಿಲು ಹತ್ತುತ್ತೇವೆ ಎಂದು ನಿರೀಕ್ಷೆ ಮಾಡದವರನ್ನು ಕರೆ ತಂದು ಶಾಸಕ, ಮಂತ್ರಿಗಳನ್ನಾಗಿ ಮಾಡಿದರು. ಹಿಂದುಳಿದವರಿಗೆ ನಿಜವಾದ ಮೀಸಲು ಸೌಲಭ್ಯ ಕೊಟ್ಟವರು ದೇವರಾಜ ಅರಸುರವರು. ಭಾರಿ ವಿರೋಧ ವ್ಯಕ್ತವಾದರೂ ಎದೆಗುಂದದೆ ನಿರ್ಣಯ ಮಾಡಿದ ಅರಸು ಅವರು ಮಾಡಿರುವ ಜನಪರ ಕಾರ್ಯಗಳನ್ನು ನೆನಪು ಮಾಡಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಸಿದ್ದರಾಮಯ್ಯ ಅವರು ಹೇಳಿದರು.

Related posts

ಜೆಸಿಐ ಭಾವನಾ ವತಿಯಿಂದ ರಕ್ತದಾನ ಶಿಬಿರ

Times fo Deenabandhu

ಕೋವಿಡ್-19 ವಿರುದ್ಧ ಹೋರಾಟ: ಆಯುರ್ವೇದೀಯ ‘ವೈರಾನಾರ್ಮ್’ ಬಿಡುಗಡೆ

 ಕೊರೋನಾ ತಡೆಗೆ ಸಂಪೂರ್ಣ ಲಾಕ್ ಡೌನ್  ಮಾಡಿ- ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ…