Public Voice
  • Home
  • ಆರೋಗ್ಯ
  • ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ
ಆರೋಗ್ಯ ಪ್ರಧಾನ ಸುದ್ದಿ ರಾಜ್ಯ

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ

ಬೆಂಗಳೂರು, ಆಗಸ್ಟ್ 30: ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

ಕೇರಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಲಸಿಕೆ ಪಡೆದಿರುವ ಪ್ರಮಾಣಪತ್ರವಿರಲಿ ಅಥವಾ ಆರ್‌ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಏನೇ ಇರಲಿ ಕೇರಳದಿಂದ ಬರುವ ಪ್ರಯಾಣಿಕರಿಗೆ ಒಂದು ವಾರದ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿರುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ತಿಳಿಸಿದರು.

ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿದ್ದು, ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ರಾಜ್ಯ ಸರ್ಕಾರ ಬದಲಾಯಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾಜಾರ್ಜ್ ತಿಳಿಸಿದ್ದಾರೆ.

ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಕೇರಳದಲ್ಲಿ ದಾಖಲಾಗಿವೆ. ದೇಶದ ಮುಕ್ಕಾಲು ಪ್ರಕರಣಗಳು ಕೇರಳವೊಂದರಿಂದಲೇ ಪತ್ತೆಯಾಗಿವೆ. ಅಗತ್ಯ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರದೇ ಇರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ರಾಜ್ಯದಲ್ಲಿ ಕೊರೊನಾ ಏರಿಕೆ ಹಿನ್ನೆಲೆಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಕೇಂದ್ರ ಸರ್ಕಾರ ಹೆಚ್ಚು ಪಾಸಿಟಿವಿಟಿ ದರ ಇರುವ ಕಡೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು.

ಕೇರಳದಲ್ಲಿ ಕೊರೊನಾ ಏರಿಕೆ ಕುರಿತು ಈಚೆಗೆ ಮಾಹಿತಿ ನೀಡಿದ್ದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ‘ರಾಜ್ಯದಲ್ಲಿ ಮನೆಯೊಳಗೇ ಕೊರೊನಾ ಸೋಂಕಿನ ಹರಡುವಿಕೆ ಹೆಚ್ಚಾಗುತ್ತಿದೆ’ ಎಂದಿದ್ದಾರೆ.

ಸದ್ಯಕ್ಕೆ ರಾಜ್ಯದ ಕೊರೊನಾ ಅಂಕಿ ಸಂಖ್ಯೆಗಳನ್ನು ಗಮನಿಸಿದರೆ, ಕೊರೊನಾ ಸೋಂಕಿನ ಹರಡುವಿಕೆ ಮನೆಯೊಳಗೇ ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಇಂಥ ಪ್ರಕರಣಗಳು ರಾಜ್ಯದಲ್ಲಿ ಅಧಿಕವಿದೆ ಎಂದಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಈ ಸಂಬಂಧ ಅಧ್ಯಯನ ನಡೆಸಿದ್ದು, ಈ ಮಾಹಿತಿ ಪ್ರಕಾರ 35% ಕೊರೊನಾ ಪ್ರಕರಣಗಳು ಮನೆಯ ಪರಿಧಿಯೊಳಗೇ ಹರಡಿದ್ದಾಗಿದೆ’ ಎಂದು ತಿಳಿಸಿದ್ದರು.

ಜಿಲ್ಲೆಗಳಲ್ಲಿ ಲಸಿಕಾ ಸ್ಥಿತಿಯನ್ನು ಆಧರಿಸಿ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ಜನರಿಗೆ ಕೊರೊನಾ ಪರೀಕ್ಷೆಗಳನ್ನು ನಡೆಸಲು ಸೂಚಿಸಲಾಗಿದೆ. ಸಮುದಾಯದಲ್ಲಿ ಕೊರೊನಾ ಹರಡುವಿಕೆಯ ನಿಖರ ಪ್ರಮಾಣ ಪತ್ತೆ ಹಚ್ಚಲು ಕರೊನಾ ಪರೀಕ್ಷೆಯನ್ನು ಚುರುಕುಗೊಳಿಸಲಾಗಿದೆ. ಸೆಂಟಿನಲ್ ಹಾಗೂ ರಾಂಡಮ್ ಪರೀಕ್ಷೆ ಆಧಾರದಲ್ಲಿ ಕೊರೊನಾ ಹರಡುವಿಕೆಯನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದರು.

ಲಸಿಕೆಯ ಮೊದಲ ಡೋಸ್ ಅನ್ನು ಶೇ 80ಕ್ಕಿಂತ ಹೆಚ್ಚು ನೀಡಿರುವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳು, ಅಂದರೆ ಗಂಟಲು ನೋವು, ಕೆಮ್ಮಿನಂಥ ಲಕ್ಷಣಗಳು ಕಂಡುಬಂದ ವ್ಯಕ್ತಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಶಿಫಾರಸು ಮಾಡಲಾಗಿದೆ ಎಂದರು.

Related posts

ಕೋಮುಗಲಭೆ, ಪ್ರಚೋದನೆಯನ್ನು ಪೊಲೀಸ್ ಇಲಾಖೆ ಎಂದಿಗೂ ಸಹಿಸುವುದಿಲ್ಲ -ನೂತನ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್

Times fo Deenabandhu

ಡಿಎಂಕೆಗೆ ಒಲಿದ ತಮಿಳುನಾಡು ಅಧಿಕಾರ ಗದ್ದುಗೆ: ಎಂ.ಕೆ. ಸ್ಟಾಲಿನ್ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್…

ಉಪಚುನಾವಣೆಯಲ್ಲಿ ಹಣಹಂಚಿಕೆ ಆರೋಪ: ಕಾಂಗ್ರೆಸ್ ಗೆ ಸಚಿವ ವಿ.ಸೋಮಣ್ಣ ತಿರುಗೇಟು…

Times fo Deenabandhu