March 26, 2021
Public Voice
  • Home
  • ಮುಖ್ಯಾಂಶಗಳು
  • ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮನವಿ ಸಲ್ಲಿಕೆ…
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮನವಿ ಸಲ್ಲಿಕೆ…

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮತ್ತು ಸಾಗರದಲ್ಲಿ ಅಪ್ರಾಪ್ತೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಸಾಗರ ಉಪವಿಭಾಗಾಧಿಕಾರಿ ಹಾಗೂ ಆರಕ್ಷಕ ಠಾಣೆಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗದ ಮೆಗ್ಘಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಸ್ನೇಹಿತರೊಂದಿಗೆ ಸೇರಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದು ಖಂಡನೀಯ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಅವರ ವ್ಯಕ್ತಿತ್ವ ಮತ್ತು ಮನೋಸ್ಥಿತಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಶಾಲೆಗಳು ನಡೆಯದ ಕಾರಣ ಮಕ್ಕಳಿಗೆ ಆನ್‍ಲೈನ್ ಕ್ಲಾಸ್‍ಗಾಗಿ ಪೊಷಕರು ಮೊಬೈಲ್ ಕೊಡುತ್ತಿದ್ದಾರೆ.ಕೆಲವು ಮಕ್ಕಳು ಅಶ್ಲೀಲ ವೀಡಿಯೋ ನೋಡಿ ಅಘಾತಕಾರಿ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಸಾಗರದಲ್ಲಿ ಬಾಲಕನೋರ್ವ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮಕ್ಕಳ ಕೈಗೆ ಮೊಬೈಲ್ ಸಿಕ್ಕರೆ ಏನೆಲ್ಲಾ ಅನಾಹುತಗಳುಸಂಭವಿಸುತ್ತವೆ ಎಂಬುದು ಕಣ್ಣಮುಂದಿದೆ. ಸರ್ಕಾರ ಆನ್‍ಲೈನ್ ಕ್ಲಾಸ್ ಬದಲಿಗೆ ಪರ್ಯಾಯ ಕ್ರಮಗಳ ಮೂಲಕ ಮಕ್ಕಳ ಕಲಿಕೆಗೆ ವ್ಯವಸ್ಥೆ ಮಾಡುವುದು ಒಳ್ಳೆಯದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಪ್ರಮುಖರಾದ ಮಧುಮಾಲತಿ, ಸುಮಂಗಲ, ರಾಜನಂದಿನಿ ಕಾಗೋಡು, ಪರಿಮಳ, ಸರಸ್ವತಿ, ಜಯಂತಿ ಸೇರಿದಂತೆ ಹಲವರಿದ್ದರು.

Related posts

ಕೇಂದ್ರ ಸರ್ಕಾರದ ಬಜೆಟ್ ಅಭಿವೃದ್ಧಿಗೆ ಪೂರಕ- ಸಂಸದ ಬಿ.ವೈ.ರಾಘವೇಂದ್ರ

Public Voice

ನಟಿ ಸಂಜನಾಗೆ ಷರತ್ತುಬದ್ದ ಜಾಮೀನು ಮಂಜೂರು…..

Public Voice

ಪ್ರಧಾನಿಗೆ ಪತ್ರ ಬರೆದರೂ ಬೆಲೆಯಿಲ್ಲ: ರಸ್ತೆ ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಬೇಕು: ಒತ್ತಾಯ

Public Voice