March 22, 2021
Public Voice
ಮುಖ್ಯಾಂಶಗಳು ರಾಜಕೀಯ ರಾಜ್ಯ

ಒಳಒಪ್ಪಂದ ರಾಜಕಾರಣ : ಮಾಜಿ ಸಿಎಂಗಳಿಬ್ಬರ ನಡುವೆ ವಾಕ್ಸಮರ….

ಬೆಂಗಳೂರು: ಒಳಒಪ್ಪಂದ ರಾಜಕಾರಣ ಬಗ್ಗೆ ಇಬ್ಬರು ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ತೀವ್ರ ವಾಕ್ಸಮರವೇ ನಡೆದಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಒಳಒಪ್ಪಂದದಿಂದ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಒಳಒಪ್ಪಂದಗಳ ಜನಕ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್ ನ ಸ್ಥಾನಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪ್ರಾದೇಶಿಕ ಪಕ್ಷ ಕಟ್ಟಿ, 10 ಸ್ಥಾನ ಗೆದ್ದು ತೋರಿಸಿ
ಜೆಡಿಎಸ್ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿದ್ದಾರೆ.

ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿದ ಬಳಿಕ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯ ಒಳ ಒಪ್ಪಂದಗಳ ಜನಕ ಎಂಬ ಹೆಚ್.ಡಿಕೆ ಟ್ವೀಟ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ರಿಯಾಕ್ಷನ್ …

ಸಿದ್ದರಾಮಯ್ಯ ಒಳಒಪ್ಪಂದಗಳ ಜನಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಈ ಬಗ್ಗೆ ನೋ ರಿಯಾಕ್ಷನ್. ಅವನು ಹೇಳಿದ್ದಕ್ಕೆಲ್ಲಾ ನಾನು ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಚಾಮುಂಡೇಶ್ವರಿಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡದ್ದು ನಿಜ. ನಾನು ಅದನ್ನೇ ಹೇಳಿದ್ದೇನೆ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಾದಾಮಿಯಲ್ಲಿ ಮಾಡಿಕೊಂಡಿರಲಿಲ್ಲ. ಅಯ್ಕೆ ಮಾಡಿಕೊಂಡ ಕೆಲವೇ ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದವು. ಗೋಪಾಲ್ ಗೆ ಟಿಕೆಟ್ ಕೊಟ್ಟು ನಿಲ್ಲಿಸಿದ್ದು ಯಾರು.? ಯಾರು ಒಳ ಒಪ್ಪಂದ ಮಾಡಿಕೊಂಡಿದ್ರು ಅಂತಾ ಎಲ್ಲರಿಗೂ ಗೊತ್ತಿದೆ. ಅವರು ಹೇಳಿದ್ದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.

ಸಿಎಂ ಆಗೋ ಮುಂಚೆನೇ ಹೋಟೆಲ್ ನಲ್ಲಿ ಕುಮಾರಸ್ವಾಮಿ ರೂಂ ಮಾಡಿಕೊಂಡಿದ್ರು…

ತಾಜ್ ವೆಸ್ಟೆಂಡ್ ನಲ್ಲಿ ಇರಲು ಸಿದ್ದರಾಮಯ್ಯ ಕಾರಣ ಎಂಬ ಸಾರಾ ಮಹೇಶ್ ಆರೋಪಕ್ಕೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿದ್ದಲ್ಲ. ಅದಕ್ಕಿಂತ ಮುಂಚೆನೇ ಅಲ್ಲಿ ಕುಮಾರಸ್ವಾಮಿ ರೂಂ ಮಾಡಿಕೊಂಡಿದ್ರು ಎಂದು ಹೇಳಿದರು.

ಬಿಜೆಪಿ ಬಗ್ಗೆ ಜೆಡಿಎಸ್ ಬರೀ ಸಾಫ್ಟ್ ಅಲ್ಲ. ಅವರ ಬೆಂಬಲಕ್ಕೆ ನಿಂತದ್ದು ಮೇಲ್ಮನೆಯಲ್ಲಿ ಕಾಣಲಿಲ್ಲವೇ. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುತ್ತೋ ಇಲ್ವೋ ನಂಗೆ ಗೊತ್ತಿಲ್ಲ. ಆದರೆ ನಾನು ಜೆಡಿಎಸ್ ನಲ್ಲಿದ್ದಾಗ 59 ಸ್ಥಾನ ಗೆದ್ದಿದ್ದೋ.ಅದು ಗೊತ್ತಿದೆಯಲ್ವಾ ಎಂದು ಸಿದ್ಧರಾಮಯ್ಯ ತಿಳಿಸಿದರು.
ನಾನು ಸ್ಥಳೀಯ ಮುಖಂಡರ ಬಗ್ಗೆ ಹೇಳಿದ್ದೆ…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಸೋಲಿಗೆ ಪಕ್ಷದ ಮುಖಂಡರು ಕಾರಣ ಅಂತಾ ಹೇಳಿದ್ದೀನಿ. ಇದು ಚಾಮುಂಡೇಶ್ವರಿ ಕ್ಷೇತ್ರದ ವಿಚಾರ ತಾನೇ. ಅಲ್ಲಿಯವರ ಬಗ್ಗೆ ನಾನು ಹೇಳಿರೋದು. ರಾಜ್ಯದ ಬೇರೆ ಕಾಂಗ್ರೆಸ್ ನಾಯಕರ ಹೆಸರು ಹೇಳಿಲ್ಲ ಎಂದು ನಿನ್ನೆ ಹೇಳಿದ್ದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಸಿಕೊಂಡರು.

Related posts

ಸ್ಕೇಟಿಂಗ್‍ನಲ್ಲಿ ಚಿನ್ನದ ಪದಕ ಪಡೆದ ಶಿವಮೊಗ್ಗದ ನಿಲ ಸಂಪತ್

Public Voice

ಮಕ್ಕಳು ಪುಸ್ತಕ ಓದುವುದರಿಂದ ಬರೆಯಲು ಪ್ರೋತ್ಸಹ – ಕು.ಅಂತಃಕರಣ

Public Voice

ಸಿಎಂ ಆಗುವ ಕನಸು ಬಿಚ್ಚಿಟ್ಟ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್……..

Public Voice