March 22, 2021
Public Voice
  • Home
  • ಮುಖ್ಯಾಂಶಗಳು
  • ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಆರಂಭ: ಸಂಭ್ರಮದಿಂದ ಶಾಲೆಗೆ ಆಗಮಿಸಿದ ಮಕ್ಕಳು…
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಆರಂಭ: ಸಂಭ್ರಮದಿಂದ ಶಾಲೆಗೆ ಆಗಮಿಸಿದ ಮಕ್ಕಳು…

ಶಿವಮೊಗ್ಗ: ಹಲವು ತಿಂಗಳುಗಳ ನಂತರ ಶಾಲೆಗಳು ಮತ್ತೆ ಆರಂಭವಾಗಿದ್ದು, ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯು ಕೂಡ ಇಂದಿನಿಂದ ಸರ್ಕಾರದ ನಿಯಮಗಳನ್ನು ಪಾಲಿಸಿ ಆರಂಭಗೊಂಡಿತು.
ಮಕ್ಕಳೆಲ್ಲರೂ ಅತಿ ಸಂಭ್ರಮದಿಂದ ಶಾಲೆಗೆ ಆಗಮಿಸಿದರು. ಮಾಸ್ಕ್ ಧರಿಸುವುದು ಸೇರಿದಂತೆ ತಮ್ಮ ಪೋಷಕರ ಒಪ್ಪಿಗೆ ಪತ್ರದೊಂದಿಗೆ ಶಾಲೆಗೆ ಹಾಜರಾದರು. ಶಾಲೆಯ ಉಪಾಧ್ಯಾಯರು ಮತ್ತು ಸಿಬ್ಬಂದಿಗಳು ಮಕ್ಕಳನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡರು. ಶಾಲೆಯಲ್ಲಿ ಹಬ್ಬದ ವಾತಾವರಣವಿತ್ತು ಮತ್ತು ಸರ್ಕಾರದ ನಿಯಮದ ಎಚ್ಚರಿಕೆಯೂ ಇತ್ತು.
ಶಾಲೆಗೆ ಎಸ್‍ಎಸ್‍ಎಲ್‍ಸಿ ಮಕ್ಕಳು ಮತ್ತು ದ್ವಿತೀಯ ಪಿಯುಸಿ ಮಕ್ಕಳು ಹಾಜರಾಗಿದ್ದರು. ಈ ಸಂದರ್ಭದಲ್ಲಿ ಮಕ್ಕಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಎನ್.ರಮೇಶ್, ಸರ್ಕಾರ ಶಾಲೆಗಳನ್ನು ಆರಂಭ ಮಾಡಿರುವುದು ಸ್ವಾಗತವೇ ಆಗಿದೆ.
ಕೊರೋನಾದ ಹಿನ್ನೆಲೆಯಲ್ಲಿ ಹಲವು ತಿಂಗಳು ಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಮತ್ತೆ ಆರಂಭವಾಗಿವೆ. ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಮ್ಮ ಶಾಲೆಯಲ್ಲಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ವಿದ್ಯಾರ್ಥಿಗಳನ್ನು ವೈಯುಕ್ತಿಕವಾಗಿ ಗಮನಿಸಲಾಗುವುದು, ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮತ್ತು ಶಿಕ್ಷಕರು ಸೇರಿದಂತೆ ತರಗತಿಗೆ ಹಾಜರಾಗುವ ಮಕ್ಕಳನ್ನು ಕೊರೋನಾ ಟೆಸ್ಟ್‍ಗೆ ಒಳಪಡಿಸಕಲಾಗುವುದು ಎಂದರು.
ನಮ್ಮ ಶಾಲೆಯಲ್ಲಿ ಈಗಾಗಲೇ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಆನ್‍ಲೈನ್ ತರಗತಿಗಳನ್ನು ಆರಂಭಿಸಲಾಗಿದೆ. ಶೇ.80ರಷ್ಟು ಮುಗಿದಿವೆ. ಇನ್ನುಳಿದ ಪಾಠವನ್ನು ತರಗತಿಯಲ್ಲಿ ಭೋಧಿಸಲಾಗುವುದು. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು. ಅವರು ಶಾಲೆಗೆ ಬರಬೇಕೆಂದೇನೂ ಕಡ್ಡಾಯವಿಲ್ಲ. ಆನ್‍ಲೈನ್ ಮೂಲಕ ಮನೆಯಲ್ಲಿಯೇ ಕಲಿಯಬಹುದು ಎಂದರು.
ಪ್ರಿಯದರ್ಶಿನಿ ಶಾಲೆ ಮಕ್ಕಳ ರಕ್ಷಣೆಯ ದೃಷ್ಟಿಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಪೋಷಕರು ಸಹ ಉತ್ತಮ ಸಹಕಾರ ನೀಡುತ್ತಿದ್ದಾರೆ. ಉತ್ತಮ ಫಲಿತಾಂಶ ಕೂಡ ಬರುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ನಮ್ಮ ಶಾಲೆ ಹಗಲಿರುಳು ಶ್ರಮಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ವೀರೇಶ್, ಉಪಪ್ರಾಂಶುಪಾಲ ಪ್ರವೀಣ್ ಇದ್ದರು.

Related posts

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆಗೆ ಸಿದ್ಧತೆ-ಸಚಿವ ಸುಧಾಕರ್….

Public Voice

ಬಿದರಹಳ್ಳಿ ಗ್ರಾ.ಪಂ. ಚುನಾವಣೆ ಬಹಿಷ್ಕಾರಕ್ಕೆ ನಾಮಪತ್ರ ಹಿಂಪಡೆಯಲು ಸರ್ವ ಪಕ್ಷ ನಿರ್ಧಾರ

Public Voice

ನಾಳೆ ಅಖಿಲ ಭಾರತ ಡಾ. ಬಿ.ಆರ್. ಅಂಬೇಡ್ಕರ್ ಸೈನ್ಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

Public Voice