March 22, 2021
Public Voice
  • Home
  • ಮುಖ್ಯಾಂಶಗಳು
  • ನಾಳೆ ಅಖಿಲ ಭಾರತ ಡಾ. ಬಿ.ಆರ್. ಅಂಬೇಡ್ಕರ್ ಸೈನ್ಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ನಾಳೆ ಅಖಿಲ ಭಾರತ ಡಾ. ಬಿ.ಆರ್. ಅಂಬೇಡ್ಕರ್ ಸೈನ್ಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

ಶಿವಮೊಗ್ಗ: ಅಖಿಲ ಭಾರತ ಡಾ. ಬಿ.ಆರ್. ಅಂಬೇಡ್ಕರ್ ಸೈನ್ಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಜನವರಿ 24 ರಂದು ಮಧ್ಯಾಹ್ನ 12 ಗಂಟೆಗೆ ಗುರುಪುರದ ನಂಜುಂಡೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ.

ಈ ಸಮಾರಂಭವನ್ನು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಎಂ. ನಾಗೇಶ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎನ್. ಮುರುಗೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಸಿ. ಹನುಮಂತಣ್ಣ, ಎಲ್. ವಿಷ್ಣು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯ ಉಸ್ತುವಾರಿ ಅಧ್ಯಕ್ಷ ರವಿತೇಜ ಭೀಮರಾವ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂಘಟನೆ ದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ದಲಿತರು, ಅಲ್ಪ ಸಂಖ್ಯಾತರು, ಅಲೆಮಾರಿಗಳು ಹಾಗೂ ಎಲ್ಲಾ ಶೋಷಿತ ವರ್ದವರು, ಎಲ್ಲಾ ಜಾತಿಯ ಬಡವರ ನ್ಯಾಯಕ್ಕಾಗಿ ಹೊಸ ಸಾಮಾಜಿಕ ಚಳವಳಿ ಹಮ್ಮಿಕೊಂಡು ಎಲ್ಲಾ ವರ್ಗದವರ ಏಳಿಗೆಗೆ ಶ್ರಮಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎ. ಅರಮಾನ್, ಉಪಾಧ್ಯಕ್ಷ ಜಿ. ಹರೀಶ್, ಹಸೀನಾ ಭಾನು, ದಂಡಪಾಣಿ, ಟಿ. ನಾಗರಾಜ್ ಇನ್ನಿತರರು ಉಪಸ್ಥಿತರಿದ್ದರು.

 

Related posts

ದೇಶದಲ್ಲಿ ಕೇಂದ್ರ ಸರ್ಕಾರದಿಂದ ಜನವಿರೋಧಿ ಆಡಳಿತ- ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್.ದೇವರಾಜ್

Public Voice

ಮೀಸಲಾತಿ ವಿಚಾರ: ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ…

Public Voice

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ: ರಾಜ್ಯ ಸರ್ಕಾರ ಮತ್ತು ಯುಕೆ ನಡುವೆ ಒಡಂಬಡಿಕೆಗೆ ಸಹಿ….

Public Voice