March 24, 2021
Public Voice
  • Home
  • ಮುಖ್ಯಾಂಶಗಳು
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಗಲಿರುಳು ಧರಣಿ ನಡೆಸುತ್ತಿದ್ದರೂ ಸ್ಪಂದಿಸದ ಜನಪ್ರತಿನಿಧಿಗಳು: ಮಾನವ ಹಕ್ಕುಗಳ ಹೋರಾಟ ಸಮಿತಿ ಖಂಡನೆ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಗಲಿರುಳು ಧರಣಿ ನಡೆಸುತ್ತಿದ್ದರೂ ಸ್ಪಂದಿಸದ ಜನಪ್ರತಿನಿಧಿಗಳು: ಮಾನವ ಹಕ್ಕುಗಳ ಹೋರಾಟ ಸಮಿತಿ ಖಂಡನೆ

ಶಿವಮೊಗ್ಗ: ಭದ್ರಾವತಿಯಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಪೂರ್ಣಗೊಳಿಸಬೇಕೆಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭದ್ರಾವತಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಜನವರಿ 11 ರಿಂದ ಹಗಲಿರುಳು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ, ಭದ್ರಾವತಿಗೆ ಆಗಮಿಸಿದ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ, ಸಂಸದರು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸ್ಪಂದಿಸದಿರುವುದನ್ನು ಮಾನವ ಹಕ್ಕುಗಳ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.

ಕಳೆದ 25 ವರ್ಷಗಳಿಂದ ನಡೆಸಿದ ಹೋರಾಟದ ಫಲವಾಗಿ 2017 ರಲ್ಲಿ ಆರಂಭವಾದ ಅಂಬೇಡ್ಕರ್ ಭವನದ ಕಾಮಗಾರಿ ಅತ್ಯಂತ ನಿರ್ಲಕ್ಷ್ಯದಿಂದ ಸಾಗುತ್ತಿದೆ. ಕೂಡಲೇ ಬಾಕಿ ಉಳಿದ ಹಣ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಿ  ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿಕೊಡಬೇಕೆಂದು ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು ಇಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಭದ್ರಾವತಿಯ ನವಲೆ ಬಸಾಪುರ ಗ್ರಾಮದ ಜನರಿಗೆ ನಿವೇಶನ ಹಾಗೂ ಸ್ಮಶಾನ ನೀಡಬೇಕು. ರಂಗಾಪುರ ಗ್ರಾಮದ 28 ಕುಟುಂಬದ ಜನರಿಗೆ ಜಮೀನು ಮಂಜೂರು ಮಾಡಬೇಕು. ಹೀಗೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಮಿತಿ ಹೋರಾಟ ನಡೆಸುತ್ತಿದ್ದರೂ, ಜನಪ್ರತಿನಿಧಿಗಳು ಸ್ಪಂದಿಸದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ತಕ್ಷಣ ಧರಣಿ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

ಜನವರಿ 25 ರಂದು ರೈತ ಸಂಘದ ವರಿಷ್ಠ ಕೆ.ಟಿ. ಗಂಗಾಧರ್ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಲಿದ್ದು, 26 ರಂದು ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆರ್. ಬಸವರಾಜ್, ಬಿ.ಎಲ್. ಅರುಣ್ ಕುಮಾರ್, ಎಂ.ವಿ. ಚಂದ್ರಶೇಖರ್, ಗಾಯಕ್ವಾಡ್, ಸುಬ್ಬೇಗೌಡ ಇನ್ನಿತರರು ಉಪಸ್ಥಿತರಿದ್ದರು

Related posts

ಒಳಒಪ್ಪಂದ ರಾಜಕಾರಣ : ಮಾಜಿ ಸಿಎಂಗಳಿಬ್ಬರ ನಡುವೆ ವಾಕ್ಸಮರ….

Public Voice

ವಿವೇಕಾನಂದರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಲಹೆ: ಅಪರ ಜಿಲ್ಲಾಧಿಕಾರಿ ಡಾ.ಕುಮಾರ್

Public Voice

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮನವಿ ಸಲ್ಲಿಕೆ…

Public Voice