March 22, 2021
Public Voice
  • Home
  • ಮುಖ್ಯಾಂಶಗಳು
  • ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಜ.26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೇಡ್…
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಜ.26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೇಡ್…

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜ.26 ರಂದು ಶಿವಮೊಗ್ಗದಲ್ಲಿ ರೈತರ ಪರ್ಯಾಯ ಗಣರಾಜ್ಯೋತ್ಸವ ಪರೇಡ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಕಾರ್ಮಿಕ ದಲಿತರ ಸಂಯುಕ್ತ ಹೋರಾಟ ಒಕ್ಕೂಟದ ಸಂಯೋಜಕ ಶಿವಾನಂದ ಕುಗ್ವೆ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ತಿದ್ದುಪಡಿ ಮಸೂದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುವ ರೈತರ ಗಣರಾಜ್ಯೋತ್ಸವ ಪರೇಡ್ ಬೆಂಬಲಿಸಿ ಹಾಗೂ ದೇಶಾದ್ಯಂತ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ಶಿವಮೊಗ್ಗ ಜಿಲ್ಲೆಯ ರೈತ ಕಾರ್ಮಿಕ ದಲಿತ ಸತ್ಯಾಗ್ರಹಿಗಳು ಅಂದು ರೈತರ ಗಣರಾಜ್ಯೋತ್ಸವ ಪರೇಡ್ ನಡೆಸಲಿದ್ದಾರೆ ಎಂದರು.

ಅಂದು ಬೆಳಿಗ್ಗೆ 11.30ಕ್ಕೆ ಶಿವಮೊಗ್ಗದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾಥಾ ನಡೆಸಿ ನಂತರ ಸಭೆ ನಡೆದು ಕೇಂದ್ರ ಸರ್ಕಾರ ಕೂಡಲೇ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ಸು ಪಡೆಯುವಂತೆ ಒತ್ತಾಯಿಸಲಾಗುವುದು ಎಂದರು.

ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಜಾಥಾದ ನೇತೃತ್ವ ವಹಿಸಲಿದ್ದು, ಜಿಲ್ಲೆಯ ಸಾವಿರಾರು ರೈತರು, ಕಾರ್ಮಿಕರು, ದಲಿತರು, ಪ್ರಗತಿಪರ ಸಂಘಟನೆಯ ಕಾರ್ಯಕರ್ತರು ಟ್ರಾಕ್ಟರ್, ಎತ್ತಿನಗಾಡಿ, ಬೈಕ್, ಕಾರುಗಳ ಮೇಲೆ ರಾಷ್ಟ್ರಧ್ವಜ ಹಾಗೂ ಸಂಘಟನೆಗಳ ಬಾವುಟಗಳನ್ನು ಕಟ್ಟಿಕೊಂಡು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಒಕ್ಕೂಟದ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ಗುರುವಾರ ರಾತ್ರಿ ಹುಣಸೋಡು ಗ್ರಾಮದಲ್ಲಿ ಕಲ್ಲುಕ್ವಾರೆಯಲ್ಲಿ ನಡೆದ ಸ್ಪೋಟದಲ್ಲಿ ಅಮಾಯಕರು ಬಲಿಯಾಗಿದ್ದು, ಈ ಘಟನೆಗೆ ಭ್ರಷ್ಟ ಅಧಿಕಾರಿಗಳು, ಅಕ್ರಮ ದಂಧೆಕೋರರು ಹಾಗೂ ಪ್ರಭಾವಿ ರಾಜಕಾರಣಿಗಳು ಕಾರಣಕರ್ತರಾಗಿದ್ದಾರೆ. ಈ ಘಟನೆ ಬಗ್ಗೆ ಉನ್ನತ ತನಿಖೆ ಹಾಗೂ ಎಲ್ಲೆಲ್ಲಿ ಅಕ್ರಮವಾಗಿ ಸ್ಪೋಟದ ಸಾಮಗ್ರಿಗಳನ್ನು ಸಂಗ್ರಹಿಸಿರುವ ಬಗ್ಗೆಯೂ ಸಹ ತನಿಖೆಯಾಗಬೇಕು ಎಂದರು.

ಕರ್ನಾಟಕ ಜನಾಶಕ್ತಿಯ ಜಿಲ್ಲಾ ಮುಖಂಡ ಕೆ.ಪಿ.ಶ್ರೀಪಾಲ್ ಮಾತನಾಡಿ, ಮೊನ್ನೆ ರಾತ್ರಿ ನಡೆದ ಸ್ಪೋಟ ಪ್ರಕರಣದ ಪ್ರಾಥಮಿಕ ವರದಿ ಬಗ್ಗೆ ಜಿಲ್ಲಾಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿಲ್ಲ ಎಂದು ಆರೋಪಿಸಿದರು.

ಘಟನೆ ಕುರಿತು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎನ್.ಡಿ.ವಸಂತ್‍ಕುಮಾರ್, ಕರಿಬಸಪ್ಪ, ಹಿರಿಯಣ್ಣಯ್ಯ, ವೀರೇಶ್ ಇನ್ನಿತರರು ಉಪಸ್ಥಿತರಿದ್ದರು.

Related posts

ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರಿಗೆ ಎಲ್ಲವನ್ನೂ ಬರೆದು ಕೊಡ್ತಿದ್ದೆ…..

Public Voice

ದೇವಸ್ಥಾನದ ನೋಂದಣಿ ಕಡ್ಡಾಯ: ಹೆಚ್.ಎಲ್ ನಾಗರಾಜ್

Public Voice

ಬಿಜೆಪಿ ಅಂದ್ರೆ ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ”- ಡಿ.ಕೆ.ಶಿವಕುಮಾರ್ ವ್ಯಂಗ್ಯ

Public Voice