ಬೆಂಗಳೂರು : ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರಿಗೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರಿ ನನ್ನ ಕೈಯಲ್ಲಿ ಇಲ್ವಲ್ಲಾ…? ಹೀಗೆ ಬೇಸರ ವ್ಯಕ್ತಪಡಿಸಿದ್ದು ಬೇರ್ಯಾರು ಅಲ್ಲ ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್.
ಹೌದು ರೈತರ ಹೋರಾಟದ ಬಗ್ಗೆ ಮಾತನಾಡಿರುವ ನಟ ಶಿವರಾಜ್ ಕುಮಾರ್, ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ.. ಆದ್ರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯುವುದರಿಂದ ಏನೂ ಸಾಧ್ಯವಾಗಲ್ಲ. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಅದು ಸರ್ಕಾರದಿಂದ ಮಾಡೋಕಷ್ಟೇ ಸಾಧ್ಯ ಎಂದು ಹೇಳುವ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ನಮ್ಮ ಸಪೋರ್ಟ್ ಖಂಡಿತಾ ಇದ್ದೇ ಇರುತ್ತೆ. ಆದ್ರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಲಹೆ ನೀಡಿದರು.
ಹಾಗೆಯೇ ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರಿ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
