March 15, 2021
Public Voice
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ ಸಿನಿಮಾ

ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್…

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.
ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಸಹ ಮೆಚ್ಚಿದ್ದರು. ಸ್ವತಃ ಕೃಷಿಕರೂ ಆಗಿರುವ ಬಿ.ಸಿ.ಪಾಟೀಲ್ ಅವರೊಂದಿಗೆ ನಟ ದರ್ಶನ್ ಚರ್ಚಿಸಿ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಿದೆ.

Related posts

ಮೊದಲ ಹಂತದ ಗ್ರಾ.ಪಂ.ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.83 ರಷ್ಟು ಮತದಾನ

Times fo Deenabandhu

ಫೆ.14 ರಂದು ಉಚಿತ ಬಂಜೆತನ ತಪಾಸಣೆ ಹಾಗೂ ಸಮಾಲೋಚನೆ ಶಿಬಿರ…

Times fo Deenabandhu

ಎರಡು ದಿನಗಳಲ್ಲಿ ರಾಜ್ಯದಲ್ಲಿ ಶಾಲೆ ಆರಂಭದ ಭವಿಷ್ಯ ನಿರ್ಧಾರ….

Times fo Deenabandhu