March 16, 2021
Public Voice
  • Home
  • ಮುಖ್ಯಾಂಶಗಳು
  • ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಸಮ್ಮತಿ
ದೇಶ ಮುಖ್ಯಾಂಶಗಳು ವಿದೇಶ

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಸಮ್ಮತಿ

ನವದೆಹಲಿ: ಜಗತ್ತಿನಲ್ಲಿ ಭಾರಿ ತಲ್ಲಣ ಸೃಷ್ಟಿಸಿರುವ ಕೋವಿಡ್ 19 ನಿಯಂತ್ರಣಕ್ಕಾಗಿ ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿದೆ.

ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

ವಿಶ್ವಸಂಸ್ಥೆ ಜಾರಿಗೆ ತಂದಿರುವ ಕೋವ್ಯಾಕ್ಸ್ ಕಾರ್ಯಕ್ರಮದ ಅಡಿಯಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಪ್ರಮುಖವಾಗಿ ವಿಶ್ವಸಂಸ್ಥೆ ಅಸ್ಟ್ರಾಜೆನೆಕಾ ಲಸಿಕೆಯನ್ನು ಹೆಚ್ಚಾಗಿ ವಿತರಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿದ್ದು, ಇತರೆ ಲಸಿಕೆಗಳಿಗೆ ಹೋಲಿಸಿದರೆ ಅಸ್ಟ್ರಾಜೆನೆಕಾ ಲಸಿಕೆ ಕಡಿಮೆ ಬೆಲೆಯಲ್ಲಿ ಲಭ್ಯವಿದೆ ಮತ್ತು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಕುರಿತು ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸುಸ್ ಅವರು, ‘ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನು ವೇಗವಾಗಿ ವಿತರಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಖ್ಯಾತ ಅಂತಾರಾಷ್ಟ್ರೀಯ ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಈ ಲಸಿಕೆಯನ್ನು ತಯಾರಿಸಿದ್ದು, ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

Related posts

ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಓರ್ವ ಸಾವು…

Public Voice

ಬಜೆಟ್ ನಲ್ಲಿ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ..

Public Voice

ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಓಪಿಡಿ ಬಂದ್‍ಗೆ ವ್ಯಾಪಕ ಬೆಂಬಲ….

Public Voice