March 15, 2021
Public Voice
  • Home
  • ಮುಖ್ಯಾಂಶಗಳು
  • ಕದನ ವಿರಾಮ ನಿಯಮಗಳ ಒಪ್ಪಂದ: ಭಾರತ-ಪಾಕ್ ನಿರ್ಧಾರ ಸ್ವಾಗತಿಸಿದ ವಿಶ್ವಸಂಸ್ಥೆ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ವಿದೇಶ

ಕದನ ವಿರಾಮ ನಿಯಮಗಳ ಒಪ್ಪಂದ: ಭಾರತ-ಪಾಕ್ ನಿರ್ಧಾರ ಸ್ವಾಗತಿಸಿದ ವಿಶ್ವಸಂಸ್ಥೆ

 

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ((ಎಲ್ಒಸಿ) ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳ ಸೇನೆಗಳು ಮಾಡಿರುವ ಒಪ್ಪಂದವನ್ನ ವಿಶ್ವಸಂಸ್ಥೆ ಸ್ವಾಗತಿಸಿದೆ.

‘ಪ್ರಸ್ತುತ ಜಾರಿ ಇರುವ ಕಾರ್ಯತಂತ್ರಗಳ ಮೂಲಕ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮದ ನಿಯಮಗಳನ್ನು ಪಾಲಿಸಲು ಭಾರತ ಮತ್ತು ಪಾಕಿಸ್ತಾನ ಕೈಗೊಂಡಿರುವ ಜಂಟಿ ಕ್ರಮಗಳಿಂದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ತುಂಬಾ ಉತ್ತೇಜಿತರಾಗಿದ್ದಾರೆ’ ಎಂದು ಗುಟೆರಸ್ ಅವರ ವಕ್ತಾರ ಸ್ಟೀಫನೆ ಡುಜರ್ರಿ್ಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಕಾರಾತ್ಮಕ ಬೆಳವಣಿಗೆ ಎರಡು ರಾಷ್ಟ್ರಗಳ ನಡುವೆ ಮುಂದೆ ನಡೆಯುವ ಮಾತುಕತೆಗಳಿಗೆ ಅವಕಾಶವನ್ನು ಕಲ್ಪಿಸಲಿದ್ದು, ಚರ್ಚೆಗೆ ದಾರಿಯೂ ಸುಗಮವಾಗಲಿದೆ ಎಂದು ಗುಟೆರಸ್ ಅಭಿಪ್ರಾಯಪಟ್ಟಿರುವುದಾಗಿ’ ಡುಜರ್ರಿಧಕ್ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರು ಎರಡು ರಾಷ್ಟ್ರಗಳ ನಾಯಕರೊಂದಿಗೆ ಚರ್ಚೆ ನಡೆಸಲಿ ದ್ದಾರೆಯೇ ಎಂಬ ಉತ್ತರಿಸಿದ ಡುಜರ್ರಿತಕ್, ‘ಸದ್ಯಕ್ಕೆ ಅಂತ ಯೋಚನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಒಳ್ಳೆಯ ಕೆಲಸಗಳಿಗೆ ಸ್ಪಂದಿಸಲು ಪ್ರಧಾನ ಕಾರ್ಯದರ್ಶಿಯವರು ಸದಾ ಸಿದ್ಧರಿರುತ್ತಾರೆ’ ಎಂದು ತಿಳಿಸಿದರು.

ಈ ಕುರಿತು ಟ್ವೀಟ್ ನಾಡಿರುವ ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಅಧ್ಯಕ್ಷ ವೋಲ್ಕನ್ ಬೊಜ್ಕಿಕರ್ ಅವರು, ‘ಗಡಿ ಭಾಗದಲ್ಲಿ ಕದನವಿರಾಮದ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ನಡೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ’ ಎಂದಿದ್ದಾರೆ. ಹಾಗೆಯೇ ಗಡಿಭಾಗದಲ್ಲಿನ ಉದ್ವಿಗ್ನತೆ ಕಡಿಮೆ ಮಾಡುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯ ಅಧಿಕಾರಿಗಳು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಒಪ್ಪಿಕೊಂಡಿದ್ದಾರೆ.

Related posts

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ…..

Public Voice

ಕನ್ನಡದಲ್ಲಿ ಸೇವೆ ಸಲ್ಲಿಸದ ವಿಮಾನಯಾನ ಸಂಸ್ಥೆಗಳ ವಿರುದ್ಧ ಐಎಎಸ್ ಅಧಿಕಾರಿ ಕಿಡಿ…

Public Voice

ನಟಿ ಸಂಜನಾಗೆ ಷರತ್ತುಬದ್ದ ಜಾಮೀನು ಮಂಜೂರು…..

Public Voice