March 24, 2021
Public Voice
  • Home
  • ರಾಜಕೀಯ
  • ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್……
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್……

ಬಾಗಲಕೋಟೆ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸದ್ಯದಲ್ಲೇ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ನಡುವೆ ಶ್ರೀರಾಮಸೇನಾ ಮುಖಂಡ ಪ್ರಮೋದ್‌ ಮುತಾಲಿಕ್‌ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆಯನ್ನು ಹೊಂದಿದ್ದೇನೆ. ಈ ಕುರಿತು ಬಿಜೆಪಿಗೆ ಮನವಿ ಸಹ ಮಾಡಿಕೊಂಡಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈಗಾಗಲೇ ನನಗೆ 66 ವರ್ಷ ವಯಸ್ಸಾಗಿದೆ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಟಿಕೆಟ್‌ ವಿಚಾರವಾಗಿ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಟಿಕೆಟ್‌ ಸಿಗುವ ಭರವಸೆ ಇದೆ. ಇನ್ನೂ ಮೂರು ವರ್ಷ ಅವಧಿ ಇದ್ದು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಅಭಿವೃದ್ಧಿ, ಹಿಂದುತ್ವದ ಕೆಲಸ ಮಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.

ಹಾಗೆಯೇ ಉಪಚುನಾವಣೆಗೆ ಒಂದು ವೇಳೆ ಟಿಕೆಟ್‌ ಸಿಗದೆ ಹೋದರೆ ಸುರೇಶ್‌ ಅಂಗಡಿಯವರ ಕುಟುಂಬಕ್ಕೋ, ಜಗದೀಶ್‌ ಶೆಟ್ಟರ್‌ ಕುಟುಂಬಕ್ಕೋ ಕೊಟ್ಟರೆ ಅವರು ನನ್ನನ್ನು ಪ್ರಚಾರಕ್ಕೆ ಕರೆದರೆ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

Related posts

ಜ.9ರಂದು ರೈಲುತಡೆ ಚಳುವಳಿ…

Public Voice

ಡಾ. ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನ “ದಾಸೋಹ ದಿನವಾಗಿ ಘೋಷಣೆ: ಪ್ರತಿಮೆ ಸ್ಥಾಪನೆ….

Public Voice

ನಾಳೆಯಿಂದ ಖಾಸಗಿ ಬಸ್ ಗಳಿಂದ ಸಂಚಾರ ವ್ಯವಸ್ಥೆಗೆ ಮುಂದಾದ ಸರ್ಕಾರ…  

Public Voice