March 16, 2021
Public Voice
  • Home
  • ಮುಖ್ಯಾಂಶಗಳು
  • ಶಿಕ್ಷಣದ ಮೂಲಕ ಹೆಣ್ಣು ಪ್ರತಿಯೊಂದು ರಂಗದಲ್ಲೂ ಸಾಧನೆ ಮಾಡುವ ಮೂಲಕ ಇನ್ನಷ್ಟು ಬಲಿಷ್ಟರಾಗಬೇಕು-ವಲಯ ಅರಣ್ಯಾಧಿಕಾರಿ ಸ್ವಾತಿ
ಚಿಕ್ಕಮಗಳೂರು ಜಿಲ್ಲೆ ಮುಖ್ಯಾಂಶಗಳು

ಶಿಕ್ಷಣದ ಮೂಲಕ ಹೆಣ್ಣು ಪ್ರತಿಯೊಂದು ರಂಗದಲ್ಲೂ ಸಾಧನೆ ಮಾಡುವ ಮೂಲಕ ಇನ್ನಷ್ಟು ಬಲಿಷ್ಟರಾಗಬೇಕು-ವಲಯ ಅರಣ್ಯಾಧಿಕಾರಿ ಸ್ವಾತಿ

ಚಿಕ್ಕಮಗಳೂರು ಮಾರ್ಚ್ 10:- ಶಿಕ್ಷಣದ ಮೂಲಕ ಹೆಣ್ಣು ಪ್ರತಿಯೊಂದು ರಂಗದಲ್ಲೂ ಸಾಧನೆ ಮಾಡುವ ಮೂಲಕ ಇನ್ನಷ್ಟು ಬಲಿಷ್ಟರಾಗಬೇಕು ಎಂದು ವಲಯ ಅರಣ್ಯಾಧಿಕಾರಿ ಸ್ವಾತಿ ಹೇಳಿದರು.
ನಗರದ ಮಲ್ಲಂದೂರು ರಸ್ತೆಯ     ಸಮುದಾಯ ಭವನದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಬಲೀಕರಣ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಮಹಿಳೆಯರು ವಿವಿಧ ಸಂಘ ಸಂಸ್ಥೆಗಳಲ್ಲಿ ಸೇರಿ ಕ್ರೀಯಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು. ಸಂಘ ಸಂಸ್ಥೆಗಳ ಸಹಕಾರದಿಂದ ಕೌಟುಂಬಿಕ ಹಾಗೂ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹೆಣ್ಣು ಮಕ್ಕಳು ಮೊದಲು ತಮ್ಮ ಸಾಮಥ್ರ್ಯದ ಬಗ್ಗೆ ಆತ್ಮ ವಿಶ್ವಾಸ ಹೊಂದಿರಬೇಕು. ಎಲ್ಲಾ ಕೆಲಸಗಳನ್ನು ಸಾಧಿಸಲು ಸಾಧ್ಯವೆಂಬ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ ಹೆಣ್ಣು ಅಬಲೆಯಲ್ಲ ಅವಳು ಸಬಲೆ, ಹೆಣ್ಣಿನಲ್ಲಿ ಅಗಾಧವಾದ ಶಕ್ತಿಯಿದೆ. ಆದರೆ ಅದರ ಅರಿವು ಅವರಿಗಿಲ್ಲ. ಅವರಲ್ಲಿರುವ ಶಕ್ತಿಯ ಅರಿವು ಅವರಿಗಾದಲ್ಲಿ ಮಹಿಳೆಯರು ಏನನ್ನು ಬೇಕಾದರೂ ಸಾಧಿಸಲು ಸಾಧ್ಯ ಎಂದು ಹೇಳಿದರು.
ಮಹಿಳೆಯರಿಗೆ ಗೌರವ, ರಕ್ಷಣೆ ನೀಡುವವರೆಗೂ ಸಮಾಜದ ಅಭಿವೃಧ್ದಿಯಾಗುವುದಿಲ್ಲ.  ಹೆಣ್ಣಿನ ಮೇಲಿನ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳು ನಿಂತರೆ ಮಾತ್ರ ದೇಶ ಅಭಿವೃಧ್ದಿ ಯಾಗುತ್ತದೆ ಎಂದು ತಿಳಿಸಿದರು.
ಮಾನವ ಹಕ್ಕು ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹೊನ್ನೇಶ್ ಮಾತನಾಡಿ ಮಹಿಳೆಯರ ಸ್ಥಾನಮಾನ ಹಾಗೂ ಸ್ಥಿತಿಗತಿಗಳು ಮನುವಾದ ಕಾಲದಲ್ಲಿ ಬಹಳ ಹೀನಾಯ ಸ್ಥಿತಿಯಲ್ಲಿದ್ದವು. ಆದರೆ ಅಂಬೇಡ್ಕರ್ ಸಂವಿಧಾನ ನೀಡಿದ ಸಂದರ್ಭದಲ್ಲಿ ಮಹಿಳೆಯ ಸ್ಥಾನಮಾನಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣದ ಕಾರ್ಯದರ್ಶಿ ರತ್ನ ನಾಗೇಶ್ ಮಾತನಾಡಿ ಮಹಿಳೆಯರು ಎಲ್ಲಾ ರಂಗದಲ್ಲೂ ಸಹ ಪುರುಷರಿಗಿಂತ ಕಡಿಮೆ ಇಲ್ಲವೆಂಬಂತೆ ಉತ್ತಮ ಸಾಧನೆ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಶಿಕ್ಷಕಿ ಸವಿತಾ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ  ಮಹಿಳಾ ಸಬಲೀಕರಣ ಸಂಘದ ಅಧ್ಯಕ್ಷೆ ಮೀನಾಕ್ಷಿ, ಖಜಾಂಚಿ ವನಜಾಕ್ಷಿ, ಸಂಘಟನಾ ಕಾರ್ಯದರ್ಶಿ ಕಾಮಾಕ್ಷಿ,  ಪ್ರಗತಿಪರ ಸಂಘಟನಾ ಒಕ್ಕೂಟದ ಕಾರ್ಯದರ್ಶಿ ಉಮೇಶ್, ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್, ಅಲ್ ಇಂಡಿಯಾ ಮುಸ್ಲಿಂ ಡೆವಲಪ್‍ಮೆಂಟ್‍ನ ನಜೀರ್‍ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಬಲೀಕರಣ ಸಂಘದ ಉಪಾಧ್ಯಕ್ಷೆ ಭೂಮಿಕಾ ಸ್ವಾಗತಿಸಿದರು. ದಿವ್ಯ ನಿರೂಪಿಸಿದರು. ರೇಖಾ ವಂದಿಸಿದರು.

Related posts

ಶಿಕ್ಷಣ ಸಂಸ್ಥೆಗಳ ಮೇಲೆ 3ನೇ ದಿನವೂ ಮುಂದುವರೆದ ಐಟಿ ದಾಳಿ…

Public Voice

ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಏರಿಕೆ: ಬಜೆಟ್ ನಲ್ಲಿ ಘೋಷಣೆ…..

Public Voice

ಆತ್ಮೋದ್ಧಾರಕ್ಕೆ ಸೇವೆ ಸಹಕಾರಿ: ಪದ್ಮನಾಭಪೈ

Public Voice