ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೇನ್ ಅವರು ಇಂದು ಕೊರೋನಾ ಲಸಿಕೆ ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಬಳಿಕ, ಇಂದು ಅವರ ತಾಯಿ ಹೀರಾಬೇನ್, ಅವರು ಕೊರೋನಾ ಲಸಿಕೆ ಪಡೆದಿದ್ದಾರೆ. ಈ ಮೂಲಕ 101 ವರ್ಷದ ಮೋದಿಯವರ ತಾಯಿ ಹೀರಾಬೇನ್ ಕೊರೋನಾ ಲಸಿಕೆಯನ್ನು ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೇ ಈ ಕುರಿತು ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ‘ನನ್ನ ತಾಯಿ ಇಂದು ಮೊದಲ ಪ್ರಮಾಣದ ಕೊರೊನಾ ಲಸಿಕೆ ಪಡೆದಿದ್ದಾರೆ, ಈ ಸಂಗತಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಸಂತಸವಾಗುತ್ತಿದೆ. ನಿಮ್ಮ ಸುತ್ತಮುತ್ತಲಿರುವ ಜನರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿ’ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇತ್ತೀಚೆಗಷ್ಟೇ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯನ್ನು ಪಡೆದಿದ್ದರು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,100 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
