March 16, 2021
Public Voice
  • Home
  • ಜಿಲ್ಲೆ
  • ವಸತಿ ಸಚಿವರ ಪ್ರವಾಸ/ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಗಾರ/ವಿದ್ಯುತ್ ನಿಲುಗಡೆ/ಹಿರಿಯ ನಾಗರೀಕರ ಯೋಗಕ್ಷೇಮ ಕೇಂದ್ರ ಪ್ರಾರಂಭ
ಚಿಕ್ಕಮಗಳೂರು ಜಿಲ್ಲೆ ಮುಖ್ಯಾಂಶಗಳು

ವಸತಿ ಸಚಿವರ ಪ್ರವಾಸ/ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಗಾರ/ವಿದ್ಯುತ್ ನಿಲುಗಡೆ/ಹಿರಿಯ ನಾಗರೀಕರ ಯೋಗಕ್ಷೇಮ ಕೇಂದ್ರ ಪ್ರಾರಂಭ

ವಸತಿ ಸಚಿವರ ಪ್ರವಾಸ
ಚಿಕ್ಕಮಗಳೂರು.ಮಾ.೧೨: ಮಾನ್ಯ ವಸತಿ ಸಚಿವ ಶ್ರೀ ವಿ.ಸೋಮಣ್ಣ ಅವರು ಮಾರ್ಚ್ ೧೪ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾರ್ಚ್ ೧೪ ರಂದು ಸಂಜೆ ೪.೦೦ ಗಂಟೆಗೆ ಕಡೂರು ತಾಲ್ಲೂಕಿನ ಸಿದ್ಧರಾಮನಹಳ್ಳಿಯಲ್ಲಿ ಶ್ರೀ ಗುರು ಸಿದ್ಧರಾಮೇಶ್ವರ ಸ್ವಾಮಿಯವರ ದೇವಾಲಯದ ಮೂಲ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಲಶಾರೋಹಣ ಮತ್ತು ಧರ್ಮ ಚಿಂತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ೫.೧೫ ಗಂಟೆಗೆ ಕಡೂರಿನಲ್ಲಿ ಸಾರ್ವಜನಿಕ ಭೇಟಿ ಮಾಡಿ, ನಂತರ ದತ್ತಾತ್ರೇಯ ನಗರದಲ್ಲಿರುವ ರಾಜೇಶ್ ಬಾಬು ರವರ ಮನೆಗೆ ಸೌಹಾರ್ದ ಭೇಟಿ ನೀಡಿ, ಸಂಜೆ ೫.೪೫ಕ್ಕೆ ಕಡೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ವಸತಿ ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿ.ಪಂ: ಕೆ.ಡಿ.ಪಿ ಸಭೆ ಮುಂದೂಡಿಕೆ
ಚಿಕ್ಕಮಗಳೂರು,ಮಾ.೧೨; ಜಿಲ್ಲಾ ಪಂಚಾಯಿತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಮಾರ್ಚ್ ೧೫ ರಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಭೆಯು ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಗಾರ
ಚಿಕ್ಕಮಗಳೂರು,ಮಾ.೧೨: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಕುವೆಂಪು ಕಲಾ ಮಂದಿರದಲ್ಲಿ ಮಾರ್ಚ್ ೧೩ ರಂದು ಬೆಳಿಗ್ಗೆ ೯.೩೦ ಗಂಟೆಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ  ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್.ಎಂ.ಹೆಚ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪಂವಾರ್ ಉಪಸ್ಥಿತರಿರಲಿದ್ದಾರೆ.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಮುಜರಾಯಿ ಇಲಾಖೆ ಆಯುಕ್ತರಾದ ಕೆ.ಎ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರು, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಹೆಚ್.ಎಲ್.ನಾಗರಾಜ್, ಚಿಕ್ಕಮಗಳೂರು ತಹಸೀಲ್ದಾರ್ ಡಾ.ಕಾಂತರಾಜ್, ಶಿವಮೊಗ್ಗದ ಪಾಸಿಟಿವ್ ಮೈಂಡ್ ಹಾಸ್ಪಿಟಲ್‌ನ ಮಾನಸಿಕ ಮತ್ತು ಮನರೋಗ ತಜ್ಞ ಡಾ.ಅರವಿಂದ್ ಎಸ್.ಟಿ, ಮೈಸೂರಿನ ತರಬೇತಿದಾರ ಆರ್.ಸುಬ್ರಹ್ಮಣ್ಯ ಉಪಸ್ಥಿತರಿರಲಿದ್ದಾರೆ.

ವಿದ್ಯುತ್ ನಿಲುಗಡೆ
ಚಿಕ್ಕಮಗಳೂರು.ಮಾ.೧೨: ನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಚಿಕ್ಕಮಗಳೂರು ೬೬/೧೧ ಕೆವಿ ವಿವಿ ಕೇಂದ್ರದಿಂದ ಹೊರಹೊಮ್ಮುವ ೧೧ ಕೆವಿ ಹುಡ್ಕೋ ಫೀಡರ್ ಮತ್ತು ೧೧ ಕೆವಿ ಲಕ್ಯಾ ಇಂಡಸ್ಟ್ರೀಯಲ್ ಹಾಗೂ ೧೧ ಕೆವಿ ಜೈಲ್ ರೋಡ್ ಫೀಡರ್‌ಗಳ ವಿದ್ಯುತ್ ಮಾರ್ಗಗಳನ್ನು ರಾಷ್ಟರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ ೧೩ ರಿಂದ ಮಾರ್ಚ್ ೩೧ ರವರೆಗೆ ಬೆಳಿಗ್ಗೆ ೧೦.೦೦ ರಿಂದ ಸಂಜೆ ೫.೦೦ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸದರಿ ಫೀಡರ್‌ಗಳ ವ್ಯಾಪ್ತಿಗೆ ಬರುವ ಜ್ಯೋತಿ ನಗರ, ಕುಪ್ಪೇನಹಳ್ಳಿ, ಎ.ಪಿ.ಎಂ.ಸಿ ಶಶಿಧರ್ ಲೇಔಟ್, ಎ.ಐ.ಟಿ ವೃತ್ತ ಬಳಿ ಮತ್ತು ಲಕ್ಯಾ ಕ್ರಾಸ್ ಇಂಡಸ್ಟ್ರೀಯಲ್ ಪ್ರದೇಶದ ವ್ಯಾಪ್ತಿಗೆ ಬರುವ ಹಾಗೂ ಜಯನಗರ, ವಿಜಯ ನಗರದ ಸ್ಪಲ್ಪ ಭಾಗ, ತೇಗೂರು ರಸ್ತೆ, ನಲ್ಲೂರು ಗೇಟ್, ಗವನಹಳ್ಳಿ, ರಾಂಪುರ, ಶ್ರೀನಿವಾಸನಗರ, ತೇಗೂರು ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ನಾಗರೀಕರ ಯೋಗಕ್ಷೇಮ ಕೇಂದ್ರ ಪ್ರಾರಂಭ
ಚಿಕ್ಕಮಗಳೂರು.ಮಾ.೧೨: ಕೊರೋನಾ ಕಾರಣದಿಂದ ಸ್ಥಗಿತವಾಗಿದ್ದ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರ ಫೆಬ್ರವರಿ ೦೨ ರಿಂದ ಪ್ರಾರಂಭವಾಗಿದ್ದು, ಹೊಸದಾಗಿ ಸದಸ್ಯರನ್ನು ನೊಂದಾಯಿಸಲಾಗುತ್ತಿದೆ.
ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಹಿರಿಯ ನಾಗರೀಕರಿಕೆ ಮಧ್ಯಾಹ್ನದ ಲಘು ಉಪಹಾರ ಚೆಸ್, ಕೇರಂ, ಗ್ರಂಥಾಲಯ ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಹಿರಿಯ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳು ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರ ತೊಗರಿಹಂಕಲ್ ಸರ್ಕಲ್ ಹತ್ತಿರ ದೂ.ಸಂ;೭೪೮೨೦೫೬೨೫೬ ನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ನೋಡಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉದ್ಯೋಗ ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಿ: ಎಸ್.ಎನ್.ನಾಗರಾಜ್

Public Voice

ಪೆಟ್ರೋಲ್, ಡೀಸೆಲ್, ಎಲ್‍ಪಿಜಿ  ದರ ಏರಿಕೆಗೆ ಖಂಡನೆ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ…

Public Voice

ಒಕ್ಕಲಿಗ ಸಮುದಾಯ ಮತ್ತು ಹಿಂದುಳಿದ ವರ್ಗಗಳಿಗೆ 500 ಕೋಟಿ ರೂ ಅನುದಾನ…

Public Voice