March 15, 2021
Public Voice
  • Home
  • ಮುಖ್ಯಾಂಶಗಳು
  • ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜನಧ್ವನಿ ಸಮಾವೇಶ….
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜನಧ್ವನಿ ಸಮಾವೇಶ….

ಶಿವಮೊಗ್ಗ,ಮಾ.13: ಅಧಿಕಾರ ದುರ್ಬಳಕೆ ಮಾಡಿಕೊಂಡು ಭದ್ರಾವತಿಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ ಮತ್ತು ಅವರ ಕುಟುಂಬಸ್ಥರ ಮೇಲೆ ರಾಜಕೀಯ ಒತ್ತಡಕ್ಕೆ ಮಣಿದು ಸುಳ್ಳು ಕೇಸು ಹಾಕಿದ್ದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜನಧ್ವನಿ ಸಮಾವೇಶಕ್ಕೆ ಅಣಿಯಾಗಿದೆ.
ಈ ಪ್ರತಿಭಟನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯಾಹ್ನವೆ ನಗರಕ್ಕೆ ಆಗಮಿಸಿದರು. ಇವರನ್ನು ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು. ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂದಿತು.  ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್ ಅವರು ಒಂದು ವಾರದಿಂದಲೇ ಶಿವಮೊಗ್ಗದಲ್ಲಿ ತಂಗಿದ್ದು, ಪ್ರತಿಭಟನೆಯ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಹೆಚ್.ಎಸ್.ಸುಂದರೇಶ್, ಆರ್.ಪ್ರಸನ್ನಕುಮಾರ್, ಕೆ.ಬಿ.ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ವೈ.ಹೆಚ್.ನಾಗರಾಜ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ್ದರು. ಜೊತೆಗೆ ರಾಜ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕವು ಕೂಡ ಈ ಪ್ರತಿಭಟನೆಗೆ ಸಾತ್ ನೀಡಿತ್ತು. ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾಧ್ಯಕ್ಷೆ ಅನಿತಾಕುಮಾರಿಯವರು ಇದರ ನೇತೃತ್ವವಹಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಗೆ ಮಹಿಳೆಯರನ್ನು ಕರೆ ತಂದಿದ್ದರು.
ಕಾಂಗ್ರೆಸ್ ಪ್ರತಿಭಟನೆಯ ಹಿನ್ನಲೆಯಲ್ಲಿ ನಗರದ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು. ನಗರ ಪ್ರವೇಶಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕಾಂಗ್ರೆಸ್ ಕಚೇರಿ, ಸಮಾವೇಶದ ಸ್ಥಳವಾದ ಸೈನ್ಸ್ ಮೈದಾನ, ಮೆರವಣಿಗೆಯ ಮುಖ್ಯ ರಸ್ತೆ ಸೇರಿದಂತೆ ಆಯಾ ಕಟ್ಟಿನ ಸ್ಥಳಗಳಲ್ಲಿ ಬಾರಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಕಾಂಗ್ರೆಸಿನ ಎಲ್ಲಾ ಜಿ.ಪಂ., ತಾ.ಪಂ., ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಪಾರ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related posts

ಪ್ರತಿಭಟನಾನಿರತ ರೈತರು ಸಂಪೂರ್ಣ ಭಯೋತ್ಪಾದಕರು ಎಂದ ಕೃಷಿ ಸಚಿವ ಬಿ.ಸಿ ಪಾಟೀಲ್

Public Voice

ಮಕ್ಕಳಲ್ಲಿರುವ ಸೃಜನಶೀಲತೆಗೆ ಪ್ರೋತ್ಸಾಹ ನೀಡಬೇಕು- ನಿಶ್ಚಿತಾ ಎಂ. ಶೆಟ್ಟಿ ಕಾರ್ಗಲ್

Public Voice

ಜ.21,22 ರಂದು ಜಲ ಸಂಪನ್ಮೂಲ ಸಚಿವರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ/ ಸರಳ ಮತದಾರ ದಿನಾಚರಣೆ/ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ

Public Voice