ಬೆಂಗಳೂರು: ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲಾಕ್ ಮೇಲ್ ಆರೋಪದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತನ ಮೂಲಕ ದೂರು ನೀಡಿದ್ದಾರೆ,
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಆಪ್ತ ಮಾಜಿ ಶಾಸಕ ನಾಗರಾಜ್ ಮೂಲಕ ಲಿಖಿತ ರೂಪದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ, ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಇನ್ನು ಸಿಡಿಯಲ್ಲಿರುವುದು ತಾನು ಅಲ್ಲ. ಈ ಸಿಡಿಯಿಂದ ತನ್ನ ತೇಜೋವಧೆ ಆಗಿದೆ, ಸೂಕ್ತವಾಗಿ ತನಿಖೆ ಮಾಡಿ ಎಂದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
