March 15, 2021
Public Voice
  • Home
  • ಮುಖ್ಯಾಂಶಗಳು
  • ಕಾಂಗ್ರೆಸ್ ಭದ್ರಾವತಿಯನ್ನ ಪಾಕಿಸ್ತಾನ ಮಾಡಲು ಹೊರಟಿದೆಯಾ..? ಶ್ರೀರಾಮುಲು ವಾಗ್ದಾಳಿ…
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕಾಂಗ್ರೆಸ್ ಭದ್ರಾವತಿಯನ್ನ ಪಾಕಿಸ್ತಾನ ಮಾಡಲು ಹೊರಟಿದೆಯಾ..? ಶ್ರೀರಾಮುಲು ವಾಗ್ದಾಳಿ…

 

ಚಿತ್ರದುರ್ಗ:  ವಿಧಾನಸಭಾ ಕಲಾಪದಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಬಟ್ಟೆ ಬಿಚ್ಚಿಸಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಈ ವಿಚಾರವಾಗಿ ಮಾತನಾಡಿದ ಸಚಿವ ಶ್ರೀರಾಮುಲು  ಕಾಂಗ್ರೆಸ್ ನವರು ಭದ್ರಾವತಿಯನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆಯೇ? ಎಂದು ಪಶ್ನಿಸಿದರು.  ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ ನಂತರ  ಮಾದ್ಯಮದ ಜತೆ ಮಾತನಾಡಿದ ಶ್ರೀರಾಮುಲು, “”ಕಾಲಚಕ್ರ ಹೀಗೆ ಇರುವುದಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಇದ್ದಾಗ ನಾನು ಹೇಳಿದ್ದೆ. ಬಿಜೆಪಿ, ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಿ ಅವರ ವಿರುದ್ಧ ಎಫ್‌ಐಆರ್ ಹಾಕಿ ರೌಡಿ ಶೀಟರ್ ಓಪನ್ ಮಾಡಿದ್ದೀರಿ. ಆಗ ಎಲ್ಲಿ ಹೋಗಿತ್ತು ನಿಮ್ಮ ಈ ಬುದ್ಧಿ ಎಂದು ಟಾಂಗ್ ನೀಡಿದರು.

ಭದ್ರಾವತಿಯಲ್ಲಿ ಪ್ರತಿಭಟನೆ ಮಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಚಿವ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರು ಶಿವಮೊಗ್ಗವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಇನ್ನು ಗಲಾಟೆ ಪ್ರಕರಣದಲ್ಲಿ ಸಂಗಮೇಶ್ ಪುತ್ರನ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇನ್ನು ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಶ್ರೀರಾಮುಲು, ಮಹಾನ್ ನಾಯಕ ಯಾರೆಂದು ನನಗೆ ಗೊತ್ತಿಲ್ಲ. ಆದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ ಎಂದು ಹೇಳಿದರು.

ಹಾಗೆಯೇ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪರ್ಧೆ ವಿಚಾರವಾಗಿ ಮಾತಾನಾಡಿದ ಅವರು, ಜನಾರ್ದನ ರೆಡ್ಡಿಯವರು ಎಲ್ಲೂ ಓಡಾಟ ಮಾಡಬಾರದೇ? ಎಂದು ಸಚಿವ ಶ್ರೀರಾಮುಲು ನುಡಿದರು.

Related posts

12 ದಿನಗಳಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆ….

Public Voice

ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್: ವೇಳಾಪಟ್ಟಿ ಇಲ್ಲಿದೆ ನೋಡಿ…..

Public Voice

“ಅನುಗ್ರಹ’’ ಯೋಜನೆ ಮತ್ತೆ ಜಾರಿ ಮಾಡದಿದ್ರೆ ವಿಧಾನಸಭೆಯಲ್ಲಿ ಹೋರಾಟ: ಸಿದ್ಧರಾಮಯ್ಯ ಎಚ್ಚರಿಕೆ…

Public Voice